ಅನಂತ್ ಕುಮಾರ್ ಕುಮಾರ್ ಅಗಲಿಕೆಗೆ ಮೋದಿ ಭಾವುಕ ಶ್ರದ್ಧಾಂಜಲಿ

THE NEWS INDIA(TNI 24 NEWS KANNADA NETWORK)...ಕೇಂದ್ರ ಸಚಿವ ಅನಂತ್ ಕುಮಾರ್ ಅವರ ನಿಧನಕ್ಕೆ ಆಘಾತ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ನನ್ನ ಸಹೋದ್ಯೋಗಿಯ ಹಠಾತ್ ಅಗಲಿಕೆ ತೀವ್ರ ನೋವನ್ನು ತರಿಸಿದೆ ಎಂದಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿಯವರು, ತಮ್ಮ ತರುಣ ವಯಸ್ಸಿನಲ್ಲೇ ರಾಜಕೀಯಕ್ಕೆ ಪದಾರ್ಪಣೆ ಮಾಡಿದ ಅನಂತಕುಮಾರ್, ಸಮಾಜ ಹಾಗೂ ದೇಶ ಸೇವೆಗಾಗಿ ತಮ್ಮನ್ನೇ ಸಮರ್ಪಣೆ ಮಾಡಿಕೊಂಡಿದ್ದರು. ಅವರ ಗಮನಾರ್ಹ ಸೇವೆಗಳಿಂದಾಗಿಯೇ ಅವರ ನೆನಪು ಸದಾ ನಮ್ಮೊಂದಿಗೆ ಇರುತ್ತದೆ ಎಂದಿದ್ದಾರೆ. ಕರ್ನಾಟಕದ ಜನಪ್ರಿಯ ನಾಯಕ ಅನಂತ್ ಕುಮಾರ್ (59) ವಿಧಿವಶ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅನಂತ್ ಕುಮಾರ್ ಅವರು ಸೋಮವಾರ ಬೆಳಿಗ್ಗೆ ಬೆಂಗಳೂರಿನ ಶಂಕರ ಆಸ್ಪತ್ರೆಯಲ್ಲಿ ನಿಧನರಾದರು. ಅವರ ಅಗಲಿಕೆಗೆ ದೇಶದಾದ್ಯಂತ ಗಣ್ಯರು ಕಂಬನಿ ಮಿಡಿದಿದ್ದು, ಸಾಲು ಸಾಲು ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಭಾವುಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ

Related posts

Leave a Comment