ಚಿಂಚೋಳಿ ಉಪ ಚುನಾವಣೆ : 27 ಅಭ್ಯರ್ಥಿಗಳಿಂದ ನಾಮಪತ್ರ

THE NEWS INDIA KANNADA NATIONAL NEWS NETWORK…ಕಲಬುರಗಿ, ಮೇ 02 : ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಕಣದಲ್ಲಿ 27 ಅಭ್ಯರ್ಥಿಗಳಿದ್ದಾರೆ. ನಾಮಪತ್ರವನ್ನು ವಾಪಸ್ ಪಡೆಯಲು ಗುರುವಾರ ಕೊನೆಯ ದಿನವಾಗಿದ್ದು, ಮೇ 19ರಂದು ಚುನಾವಣೆ ನಡೆಯಲಿದೆ. ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ನಾಮಪತ್ರಗಳ ಪರಿಶೀಲನಾ ಕಾರ್ಯ ಮಂಗಳವಾರ ಮುಕ್ತಾಯಗೊಂಡಿದೆ. ಎಲ್ಲಾ 27 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿದೆ. ಮೇ 23ರಂದು ಕಲಬುರಗಿ ಜಿಲ್ಲೆಯ ಚಿಂಚೋಳಿ ಉಪ ಚುಣಾವಣೆ ಫಲಿತಾಂಶ ಪ್ರಕಟವಾಗಲಿದೆ.
ನಾಮಪತ್ರಗಳ ಪರಿಶೀಲನೆ ನಡೆಸಿದ ನಂತರ ಎಲ್ಲ 27 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಸೋಮಶೇಖರ ಎಸ್.ಜಿ. ಹೇಳಿದ್ದಾರೆ. ನಾಮಪತ್ರ ಹಿಂದಕ್ಕೆ ಪಡೆಯಲು ಮೇ 2 ಕೊನೆಯ ದಿನ.

Related posts

Leave a Comment