ಡಿಕೆ ಶಿವಕುಮಾರ್ ಕುಟುಂಬಕ್ಕೆ ಧೈರ್ಯ ಹೇಳಿದ ಸ್ವಾಮೀಜಿಗಳು

THE NEWS INDIA 24/7 NATIONAL KANNADA NEWS NETWORK.ಬೆಂಗಳೂರು, ಸೆಪ್ಟೆಂಬರ್ 10 : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಬಂಧನವಾಗಿದೆ. ಹಲವು ಸ್ವಾಮೀಜಿಗಳು, ರಾಜಕೀಯ ನಾಯಕರು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೆಪ್ಟೆಂಬರ್ 3ರಂದು ಡಿ. ಕೆ. ಶಿವಕುಮಾರ್ ಬಂಧಿಸಿದ್ದಾರೆ. ಸೆಪ್ಟೆಂಬರ್ 13ರ ತನಕ ಅವರನ್ನು ಇಡಿ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸದ್ಯ ಅವರು ನವದೆಹಲಿಯಲ್ಲಿದ್ದಾರೆ.

ಧೈರ್ಯ ತುಂಬಿದ ನಿರ್ಮಲಾನಂದ ಸ್ವಾಮೀಜಿ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿಗಳು ಡಿ.ಕೆ. ಶಿವಕುಮಾರ್‌ರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ, ಡಿ. ಕೆ. ಶಿವಕುಮಾರ್ ಪತ್ನಿ ಉಷಾ ಮತ್ತು ಕುಟುಂಬ ಸದಸ್ಯರಿಗೆ ಧೈರ್ಯ ಹೇಳಿದರು. ಡಿ. ಕೆ. ಶಿವಕುಮಾರ್ ಪುತ್ರಿ ಐಶ್ವರ್ಯ, ಪುತ್ರ ಆಕಾಶ್ ಮುಂತಾದವರು ಉಪಸ್ಥಿತರಿದ್ದರು.

ನಂಜಾವಧೂತ ಸ್ವಾಮೀಜಿ ಭೇಟಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಡಿ. ಕೆ. ಶಿವಕುಮಾರ್ ನಿವಾಸಕ್ಕೆ ನಂಜಾವಧೂತ ಸ್ವಾಮೀಜಿ ಭೇಟಿ ನೀಡಿ ಕುಟುಂಬಕ್ಕೆ ಧೈರ್ಯ ತುಂಬಿದರು. ಡಿ. ಕೆ. ಶಿವಕುಮಾರ್ ತಾಯಿ ಗೌರಮ್ಮ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.

Related posts

Leave a Comment