ಕಾಶ್ಮೀರದಲ್ಲಿ ಹಿಮಪಾತ: ಸೈನಿಕರು ಸೇರಿ 12 ಮಂದಿ ಸಾವು

THE NEWS INDIA 24/7 NATIONAL KANNADA NEWS NETWORK…….ಶ್ರೀನಗರ, ಜನವರಿ 15: ಕಾಶ್ಮೀರದ ಕುಪ್ವಾರ ಮತ್ತು ಗಾಂಧರ್‌ಬಲ್ ಜಿಲ್ಲೆಗಳಲ್ಲಿ ಸಂಭವಿಸಿದ ಭಾರಿ ಹಿಮಪಾತದಲ್ಲಿ ಕನಿಷ್ಠ ಆರು ಮಂದಿ ಸೈನಿಕರು ಮತ್ತು ಆರು ಮಂದಿ ನಾಗರಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಶ್ಮೀರದ ಐದು ಕಡೆ ಹಿಮಪಾತ ಸಂಭವಿಸಿರುವುದು ವರದಿಯಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಕುಪ್ವಾರ ಜಿಲ್ಲೆಯ ಮಾಚಿಲ್ ಪ್ರದೇಶದ ಶಹಾಪುರದಲ್ಲಿನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಕಳೆದ 24 ಗಂಟೆಗಳಲ್ಲಿ ಮೂರು ಪ್ರತ್ಯೇಕ ಹಿಮಪಾತದ ಅವಘಡಗಳು ಸಂಭವಿಸಿದ್ದು, ಭಾರತೀಯ ಸೇನೆ ಮತ್ತು ಅರೆಸೇನಾ ಪಡೆಯ ನೆಲೆಗಳು ತೊಂದರೆ ಅನುಭವಿಸಿವೆ ಎಂದು ಸೇನಾ ವಕ್ತಾರ ರಾಜೇಶ್ ಕಾಲಿಯಾ ತಿಳಿಸಿದ್ದಾರೆ.


Related posts

Leave a Comment